ಜೆಡಿಎಸ್ ನ ಏಳು ಬಂಡಾಯ ಶಾಸಕರಿಗೆ ಹೆಗಲೇರಿದೆ ಶನಿ...!
ಜೆಡಿಎಸ್ ನ ಬಂಡಾಯ ಶಾಸಕರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗುತ್ತಿದ್ದಂತೆಯೇ ವಿಧಾನಸಭಾಧ್ಯಕ್ಷರು ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್ ನ ಏಳು ಮಂದಿ ಬಂಡಾಯ ಶಾಸಕರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ಮಾ. 19 ರಂದು ಬೆಳಗ್ಗೆ 11.30 ಕ್ಕೆ ವಿಧಾನಸೌಧದ ಸಭಾಧ್ಯಕ್ಷರ ಕೊಠಡಿಯಲ್ಲಿ ವಿಚಾರಣೆ ಮುಂದುವರಿಯಲಿದ್ದು, ವಿಚಾರಣೆಗೆ ಅರ್ಜಿದಾರರು ಹಾಗೂ ಪ್ರತಿವಾದಿಗಳು ಹಾಜರಾಗುವಂತೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಜೆಡಿಎಸ್ ನ 7 ಮಂದಿ ಶಾಸಕರ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನಸಭಾಧ್ಯಕ್ಷರಿಗೆ ಎರಡು ವರ್ಷಗಳ ಹಿಂದೆ ಜೆಡಿಎಸ್ ಶಾಸಕರಾದ ಬಿ.ಬಿ. ನಿಂಗಯ್ಯ ಹಾಗೂ ಸಿಎನ್ ಬಾಲಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್, ನಾಗಮಂಗಲ ಕ್ಷೇತ್ರದ ಎನ್. ಚಲುವರಾಯಸ್ವಾಮಿ, ಶ್ರೀರಂಗಪಟ್ಟಣದ ಎ.ಬಿ. ರಮೇಶ ಬಂಡಿಸಿದ್ದೇಗೌಡ, ಮಾಗಡಿ ಕ್ಷೇತ್ರದ ಎಚ್.ಸಿ. ಬಾಲಕೃಷ್ಣ, ಪುಲಿಕೇಶಿನಗರದ ಆರ್. ಅಖಂಡ ಶ್ರೀನಿವಾಸಮೂರ್ತಿ, ಗಂಗಾವತಿ ಕ್ಷೇತ್ರದ ಇಕ್ಬಾಲ್ ಅನ್ಸಾರಿ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಎಸ್. ಭೀಮಾನಾಯಕ್ ಅವರಿಗೆ ಕಂಟಕ ಎದುರಾಗಿದೆ.
Comments