ಬಿಜೆಪಿಯ ಮತ್ತೊಂದು ವಿಕೆಟ್ ಜೆಡಿಎಸ್ ಪಾಲು..!!
ಮುಂಬರುವ ವಿಧಾನಸಭಾ ಚುನಾವಣೆ ಬರುತ್ತಿದ್ದಂತೆಯೇ ರಾಜಕೀಯದ ಕಾವು ಹೆಚ್ಚಾಗುತ್ತಿದೆ. ಬಿಜೆಪಿ ರಾಜ್ಯ ಸಭಾ ಟಿಕೆಟ್ ಆಕಾಂಕ್ಷಿ ವಿ.ಆರ್.ಎಲ್ ಮುಖ್ಯಸ್ಥ ವಿಜಯ ಸಂಕೇಶ್ವರ್ ಬಿಜೆಪಿಗೆ ಗುಡ್ ಬೈ ಹೇಳುತ್ತಾರಾ ಎನ್ನುವ ಶಂಕೆಗಳು ವ್ಯಕ್ತವಾಗಿವೆ.
ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ರಾಜ್ಯ ಸಭಾ ಟಿಕೆಟ್ ಕೈತಪ್ಪಿ ಬಿಜೆಪಿ ಉದ್ಯಮಿ ರಾಜೀವ್ ಚಂದ್ರಶೇಖರ್ ಅವರ ಪಾಲಾಗಿರುವುದರಿಂದ ವಿಜಯ ಸಂಕೇಶ್ವರ್ ಅವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಲವು ವರ್ಷಗಳಿಂದ ಬಿಜೆಪಿಗೆ ಮಾಧ್ಯಮ ಸಹಿತ ಎಲ್ಲಾ ಬಲಗಳನ್ನು ಧಾರೆಯೆರೆದಿದ್ದ ವಿಜಯ ಸಂಕೇಶ್ವರ್ ಅವರು ಬಿಜೆಪಿಗೆ ಗುಡ್ ಬೈ ಹೇಳಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments