ಜೆಡಿಎಸ್ ನ ಏಳು ಬಂಡಾಯ ಶಾಸಕರಲ್ಲಿ ಶುರುವಾಗಿದೆ ಭಯ..!!
ಎರಡು ವರ್ಷದ ಹಿಂದೆ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದಾಗ, ಸ್ಪೀಕರ್ ಗೆ ಜೆಡಿಎಸ್ ವರಿಷ್ಠರು ದೂರು ಕೊಟ್ಟಿದ್ದರು. ಅರ್ಜಿ ವಿಚಾರಣೆಯ ವಿಳಂಬ ನೀತಿಗೆ ಜೆಡಿಎಸ್ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಸ್ಪೀಕರ್, ಇಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ಈ ಏಳು ಬಂಡಾಯ ಶಾಸಕರಲ್ಲಿ ಶುರುವಾಗಿದೆ ಭಯ ಎಂದು ಮೂಲಗಳು ತಿಳಿಸಿವೆ.
ಇಂದು ನಡೆಯಲಿರುವ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರು ಅಡ್ಡ ಮತದಾನ ಮಾಡಲಿರುವ ಹಿನ್ನಲೆಯಲ್ಲಿ ಜೆಡಿಎಸ್ ಹೈಕೋರ್ಟ್ ಮೊರೆ ಹೋಗಿದೆ. ಜಮೀರ್ ಅಹಮ್ಮದ್ ಖಾನ್, ಚೆಲುವರಾಯಸ್ವಾಮಿ, ಹೆಚ್.ಸಿ. ಬಾಲಕೃಷ್ಣ, ಭೀಮಾನಾಯ್ಕ, ಅಖಂಡ ಶ್ರೀನಿವಾಸಮೂರ್ತಿ, ರಮೇಶ್ ಬಂಡಿಸಿದ್ದೇಗೌಡ ಅವರು ಇಂದು ಸ್ಪೀಕರ್ ಕೊಠಡಿಯಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗಲಿದ್ದಾರೆ. ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
Comments