ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ್ ಗೆ ತಿರುಗೇಟು ನೀಡಲು ಮುಂದಾದ ಎಚ್ ಡಿಕೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಜೆಡಿಎಸ್ ಪಕ್ಷದ ಗೊಂದಲ ನಿವಾರಿಸಲು ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಕರೆಯಲಾಗಿದ್ದ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಹತ್ತರ ನಿರ್ಧಾರವೊಂದು ಹೊರಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಯವರುಎರಡು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಪ್ರಕಟಿಸಿದ್ದಾರೆ. ರಾಮನಗರ ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಎಲ್ಲಾ ಉಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
ಅನಿತಾ ಕುಮಾರಸ್ವಾಮಿ ಒಮ್ಮತದ ಅಭ್ಯರ್ಥಿ ಯಾಗಬೇಕು ಎಂದು ಸಭೆಯಲ್ಲಿ ಚನ್ನಪಟ್ಟಣ ಮುಖಂಡರು ಬಿಗಿಪಟ್ಟು ಹಿಡಿದ ಹಿನ್ನಲೆಯಲ್ಲಿ ಅವರು ಮುಖಂಡರಿಗೆ ವಿವರಿಸಿ ಹೇಳಿದರು. ಎರಡು ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಎಚ್ ಡಿಕೆ ಘೋಷಿಸಿದರು. ಇದರಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಇಬ್ಬರು ಸದಸ್ಯರು ಮಾತ್ರ ಸ್ಪರ್ಧೆ ಮಾಡುವುದು ಎಂದು ಸ್ಪಷ್ಟ ಪಡಿಸಿದರು, ಸಿ.ಪಿ.ಯೋಗೇಶ್ವರ್ ರಾಜಕೀಯ ಜೀವನಕ್ಕೆ ಎಳ್ಳು ನೀರು ಬಿಡಲು ಎಚ್.ಡಿ.ಕುಮಾರಸ್ವಾಮಿ ಯವರು ಮುಂದಾಗಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎಚ್. ಡಿ.ಕುಮಾರಸ್ವಾಮಿ ಅವರ ವರ್ಚ್ಚಸ್ಸು ಇರುವುದರಿಂದ ಬಹುಮತದೊಂದಿಗೆ ಜೆಡಿಎಸ್ ಈ ಬಾರಿ ಕ್ಷೇತ್ರವನ್ನು ವಶಕ್ಕೆ ಪಡೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
Comments