ಎಚ್ ಡಿಕೆ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ ದೇವೇಗೌಡ್ರು
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳಿಲ್ಲ. ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ, ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಪಕ್ಷದಿಂದ ಯಾವುದೇ ತಡೆ ಇಲ್ಲ. ಈ ಹಿಂದೆ ನಾನೂ ಕೂಡ ಸಾತನೂರು ಮತ್ತು ಹೊಳೆನರಸೀಪುರದಿಂದ ಸ್ಪರ್ಧಿಸಿದ್ದೆ ಎಂದು ಅವರು ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನನ್ನ ಅಭ್ಯಂತರವಿಲ್ಲ ಎಂದು ಎಚ್.ಡಿ. ದೇವೇಗೌಡ ಅವರು ಸುಳಿವು ನೀಡಿದರು. ಕಾವೇರಿ ಕುರಿತ ಗುರುವಾರ ನಡೆಯುವ ಸಭೆಗೆ ಹೋಗುತ್ತೇನೆ, ಕೇಂದ್ರ ಸಚಿವರು ಈ ಸಭೆಯಲ್ಲಿ ಇದ್ದರೆ ಒಳ್ಳೆಯದು, ಏಕೆಂದರೆ ಈಗ ಕಾವೇರಿ ವಿಷಯ ಕೇಂದ್ರ ಸರ್ಕಾರದ ಅಂಗಳದಲ್ಲಿದೆ, ಸಂಸತ್ ಅಧಿವೇಶನ ಇರುವುದರಿಂದ ಬಿಜೆಪಿ ಸಂಸದರು ಬರುತ್ತಾರೋ ಇಲ್ಲವೋ ಗೊತ್ತಿಲ್ಲ ,ಈಗಾಗಲೇ ನಾನು ಒಂದು ಸ್ಕೀಂ ಮಾಡಿಕೊಟ್ಟಿದ್ದೇನೆ, ತಮಿಳುನಾಡಿನ ಎಲ್ಲಾ ಪಕ್ಷದ ಸಂಸದರು ಒಗ್ಗಟ್ಟಾಗಿದ್ದಾರೆ, ರಾಜ್ಯದ ಸಂಸದರು ಒಗ್ಗಟ್ಟಾಗಬೇಕಿದೆ ಎಂದು ಕರೆ ನೀಡಿದರು.
Comments