ಹೊಸ ರಾಜಕೀಯ ಮನ್ವಂತರಕ್ಕೆ ನಾಂದಿ ಹಾಡಲಿರುವ ವಿಕಾಸ ಪರ್ವ



ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಮಾಗಡಿಯ ಕೋಟೆ ಮೈದಾನದಲ್ಲಿ ನಡೆಯಲಿರುವ ವಿಕಾಸ ಪರ್ವ ಸಮಾವೇಶ ಹೊಸ ರಾಜಕೀಯ ಮನ್ವಂತರಕ್ಕೆ ನಾಂದಿ ಹಾಡಲಿದೆ ಎಂದು ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಸಮಾವೇಶದ ಸಿದ್ದತೆ ಕುರಿತು ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರು, ಕೆಂಪೇಗೌಡರ ಕೋಟೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಐವತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದು, ಈ ಸಮಾವೇಶದತ್ತ ರಾಜ್ಯವೇ ತಿರುಗಿ ನೋಡುತ್ತಿದೆ ಎಂದರು. ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಭಾಗವಹಿಸಲಿದ್ದು, ಐವತ್ತು ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕರ್ತರು ಸ್ವಪ್ರೇರಣೆಯಿಂದ ಭಾಗವಹಿಸುತ್ತಿದ್ದಾರೆ ಎಂದರು.
Comments