ಮಹಿಳಾ ಸಮಾಜ ಕಸ್ತೂರಿಬಾ ಶಿಶುವಿಹಾರ ಕೇಂದ್ರ ಇವರಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ



29ನೇ ಮಾರ್ಚ್ ಗುರುವಾರದಂದು ನಗರದ ಮಹಿಳಾ ಸಮಾಜದಲ್ಲಿ ಬೆಳಿಗ್ಗೆ 10-30 ಸಮಾಜದ ಆವರಣದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ-2018 ಕಾರ್ಯಕ್ರಮ ಆಯೋಜಿಸಲಾಗಿದೆ, ಮುಖ್ಯ ಅತಿಥಿಗಳಾಗಿ ಡಾ|| ಎಂ.ಎಸ್. ಆಶಾದೇವಿ,ಪ್ರಾಧ್ಯಾಪಕರು, ಮಹಾರಾಣಿ ವಿಜ್ಞಾನ ಕಾಲೇಜು, ಬೆಂ. ಡಾ|| ಬೇಬಿ ವಾಲೇಕರ್, ಸಬ್ ಇನ್ಸ್ ಪೆಕ್ಟರ್, ಮಹಿಳಾ ಪೋಲೀಸ್ ಠಾಣೆ, ದೊಡ್ಡಬಳ್ಳಾಪುರ ಮತ್ತು ಶ್ರೀಮತಿ ಸುಲೋಚನಮ್ಮ, ನಿವೃತ್ತ ಪ್ರಾಧ್ಯಾಪಕರು,ರೈತನಾಯಕಿ ಆಗಮಿಸಲಿದ್ದಾರೆ, ಅಧ್ಯಕ್ಷತೆಯನ್ನು ಕೆ.ಎಸ್. ಪ್ರಭ, ಅಧ್ಯಕ್ಷರು ಮಹಿಳಾ ಸಮಾಜ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ವಸ್ತು ಪ್ರದರ್ಶನ ಮತ್ತು ಮಾರಾಟ, ನಂತರ ಉಪಹಾರದ ವ್ಯವಸ್ಥೆ ಇರುತ್ತದೆ ಎಂದು ಕಾರ್ಯದರ್ಶಿ ದೇವಕಿ ತಿಳಿಸಿದ್ದಾರೆ.
Comments