ನಗರಸಭೆಯ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ, ಹಾಲಿ/ಮಾಜಿ ಸದಸ್ಯರಿಂದ ರಾಜಕೀಯ ಲೆಕ್ಕಾಚಾರ ಶುರು




ದೊಡ್ದಬಳ್ಳಾಪುರ ನಗರಸಭೆ ಕರಡು ಮೀಸಲಾತಿ ಪಟ್ಟಿಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ, ಅಧಿಸೂಚನೆಯ ಮೂಲಕ ಕರಡು ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದ್ದು, ಪ್ರಕಟಿಸಿದ 7 ದಿನಗಳ ತರುವಾಯ ಅಧಿಸೂಚನೆಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಈ ವಿಚಾರದಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ತಿಳಿಸಬೇಕು, ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬಹುದು ಎಂದು ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಎಲ್.ಬಾಗಲವಾಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments