ಮಂಡಿ ಬ್ಯಾಡರಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉಧ್ಘಾಟನೆ, ಮನೆಮನೆಗೆ ಭೇಟಿ. ಚುನಾವಣಾ ಪ್ರಚಾರಕ್ಕೆ ಚಾಲನೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಮಂಡಿಬ್ಯಾಡರಹಳ್ಳಿ ಗ್ರಾಮದ ಪ್ರಸನ್ನ ಆಂಜನೇಯ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ಜನಪ್ರಿಯ ಮಾಜಿ ಶಾಸಕರು ಹಾಗೂ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ರವರು ಮತದಾರರ ಮನೆಮನೆಗೆ ಭೇಟಿ ನೀಡುವುದರ ಮುಖಾಂತರ ಇಂದಿನಿಂದ ಚುನಾವಣಾ ಪ್ರಚಾರಕ್ಕೆ ತಾಲ್ಲೂಕಿನಲ್ಲಿ ಚಾಲನೆ ನೀಡಿದರು. ಕೃಷ್ಣಮೂರ್ತಿ, ಲಕ್ಷ್ಮೀನಾರಾಯಣ್ ಸೇರಿದಂತೆ ತಾಲ್ಲೂಕಿನ ಎಲ್ಲಾ ಬಿಜೆಪಿ ಮುಖಂಡರು ಮಂಡಿಬ್ಯಾಡರ ಹಳ್ಳಿಯ ನಾಗರೀಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಂಡಿ ಬ್ಯಾಡರಹಳ್ಳಿ ಹಾಲು ಉತ್ಪಾದಕರ ಸಂಘದ ವತಿಯಿಂದ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಿದರು.
Comments