ರಾಷ್ಟ್ರೀಯ ಪಕ್ಷಗಳ ಜೊತೆ ಮೈತ್ರಿ ಬಗ್ಗೆ ಎಚ್ ಡಿಕೆ ಹೇಳಿದ್ದು ಹೀಗೆ..!!
ಜೆಡಿಎಸ್ ಚುನಾವಣೆ ಎದುರಿಸಲು ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಹ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಜೆಡಿಎಸ್ ಸ್ವಂತ ಬಲದ ಮೇಲೆ ಸರಳ ಬಹುಮತ ಪಡೆಯಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ದೇವೇಗೌಡರ ಹೇಳಿಕೆ ವ್ಯಂಗದಿಂದ ಕೂಡಿದ್ದು, ಇದನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದರು. ಚುನಾವಣಾ ಆಯೋಗ ಇಂದು ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಸಲು ದಿನಾಂಕ ಪ್ರಕಟಿಸಿದ್ದು, ಇದನ್ನು ಜೆಡಿಎಸ್ ಸ್ವಾಗತಿಸುತ್ತದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದು ಒಳ್ಳೆಯದು ಎಂದು ಕುಮಾರಸ್ವಾಮಿ ತಿಳಿಸಿದರು.
Comments