ಸಾಮಾಜಿಕ ಜಾಲತಾಣಕ್ಕೆ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಸಂಚಾಲಕರ ನೇಮಕ
ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಕಛೇರಿಯಲ್ಲಿ ಸಾಮಾಜಿಕ ಜಾಲತಾಣಕ್ಕೆ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಸಂಚಾಲಕರನ್ನು ನೇಮಕ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾದ ಹನುಮಂತೇಗೌಡರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಾಂತರಾಜ್, ಬಿಜೆಪಿ ಜಿಲ್ಲಾ ವಕ್ತಾರರಾದ ಅಶ್ವತ್ಥನಾರಾಯಣ ಸ್ವಾಮಿ, ಯುವ ಮೋರ್ಚಾ ಅಧ್ಯಕ್ಷರಾದ ಚಂದ್ರೇಗೌಡರು ಹಾಗೂ ತಾಲ್ಲೂಕಿನ ಸಾಮಾಜಿಕ ಜಾಲತಾಣದ ಸಂಚಾಲಕರಾದ ಚಂದೇಶ್ ಕುಮಾರ್ ಮಾತನಾಡುತ್ತಾ ಯಾವುದೇ ವ್ಯಕ್ತಿಯ ತೇಜೋಹರಣ ಮಾಡಬೇಡಿ, ಯಾರನ್ನೇ ಆಗಲಿ ಗೌರವಾನ್ವಿತವಾಗಿ ಸಂಭೋದಿಸಿ ಜಾಲತಾಣಗಳಲ್ಲಿ ಪೋಸ್ಟಿಂಗ್ ಮಾಡುವಂತೆ ಹೇಳಿದರು.
Comments