ಜೆಡಿಎಸ್ ನತ್ತ 'ಕೈ- ಕಮಲ'ದ ನಾಯಕರ ಒಲವು...!!
ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರದ ಚುಕ್ಕಾಣೆ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಜೆಡಿಎಸ್, ತನ್ನ ಅಧಿಕಾರದ ಪ್ರಾಬಲ್ಯದಿಂದ ಅನ್ಯ ಪಕ್ಷಗಳ ಮುಖಂಡರು ತಮ್ಮತ್ತ ತಿರುಗು ನೋಡುವಂತೆ ಮಾಡುತ್ತಿದ್ದಾರೆ.
ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಅಸಮಾಧಾನಗೊಂಡಿರುವ ಕೆಲವು ಶಾಸಕರು ಜೆಡಿಎಸ್ ನತ್ತ ಮುಖ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರಾವಳಿ ಜಿಲ್ಲೆಯ ಪ್ರಭಾವಿ ಉದ್ಯಮಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಯುವ ಸಚಿವರೊಬ್ಬರು ನವದೆಹಲಿಯಲ್ಲಿ ರಾಷ್ಟ್ರೀಯ ಬಿಜೆಪಿ ನಾಯಕರೊಬ್ಬರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.ಇದೇ ರೀತಿ ಬೆಂಗಳೂರಿನ ಪ್ರಭಾವಿ ಸಚಿವರೊಬ್ಬರು ಕೂಡ ಜೆಡಿಎಸ್ ಸೇರ್ಪಡೆಗೆ ಮತ್ತೆ ವೇಗ ಪಡೆದುಕೊಂಡಿದೆ. ಪಕ್ಷದಲ್ಲಿ ತಮ್ಮನ್ನು ತಮ್ಮ ಸಮುದಾಯದವರೇ ಕಡೆಗಣಿಸುತ್ತಿದ್ದಾರೆ ಎಂದು ಬೇಸರಗೊಂಡಿರುವ ಈ ಸಚಿವರು ಜೆಡಿಎಸ್ ಸೇರ್ಪಡೆಗೆ ಒಲವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕಲಬುರಗಿ ಮೂಲದ ಹಿಂದುಳಿದ ಸಮುದಾಯದ ಪ್ರಭಾವಿ ಶಾಸಕರೊಬ್ಬರು ಕೂಡ ಜೆಡಿಎಸ್ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments