ಜೆಡಿಎಸ್ ನ 2ನೇ ಪಟ್ಟಿ ಬಿಡುಗಡೆ ಬಗ್ಗೆ ಸುಳಿವು ಕೊಟ್ಟ ಎಚ್ ಡಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ನಡೆದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ನಗರದಲ್ಲಿ ಮಾತನಾಡಿದ ಅವರು, ರಾಮನಗರ ನನ್ನ ಕರ್ಮ ಭೂಮಿಯಾಗಿದ್ದು ಕಾರ್ಯಕರ್ತರ ಒತ್ತಡ, ಬಯಕೆಯಂತೆ ಮತ್ತೊಂದು ಕಡೆ ಕಣಕ್ಕಿಳಿಯುತ್ತೇನೆ ಎಂದು ತಿಳಿಸಿದರು. ನಮಗೆ ಪ್ರತಿಯೊಂದು ಕ್ಷೇತ್ರವೂ ಸೂಕ್ಷ್ಮವಾಗಿದೆ. ಪ್ರತಿಯೊಂದು ಕ್ಷೇತ್ರವನ್ನು ಗೆಲ್ಲಬೇಕು. ಉತ್ತರ ಕರ್ನಾಟಕದ ಬದಲು ಇದೇ ಭಾಗದಲ್ಲಿ ಸ್ಪರ್ಧಿಸುತ್ತೇನೆ ಎಂದರು. ಏಪ್ರಿಲ್ ಮೊದಲ ವಾರದಲ್ಲಿ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ಅವರು ಹೇಳಿದರು.
Comments