ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದು ನಿಶ್ಚಿತ

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜುನಾಥ್ , ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವುದು ಶತಸಿದ್ಧ. ಹಿಂದಿನ ಆಡಳಿತವನ್ನು ಮೆಚ್ಚಿ ಯುವಕರು ಜೆಡಿಎಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಯುವಕರಿಗೆ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಯುವಕರಿಗೆ ಭರವಸೆ ಕೊಟ್ಟರು.
ಸಿದ್ದರಾಮಯ್ಯ ದರ್ಪದ ಆಡಳಿತದಿಂದ ಜನ ಬೇಸತ್ತಿದ್ದಾರೆ. ಈ ಬಾರಿ ಕುಮಾರಣ್ಣ ಕೈ ಬಲಪಡಿಸಲಿದ್ದಾರೆ. ಈ ಬಾರಿ ಎನ್. ಪ್ರಭಾಕರ್ ರೆಡ್ಡಿ ಮುಂದಿನ ದಿನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಗೊಟ್ಟಿಗೆರೆಯಲ್ಲಿ 500ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‍ಗೆ ಸೇರ್ಪಡೆಗೊಂಡರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್.ಪ್ರಭಾಕರ್ ರೆಡ್ಡಿ ಮಾತನಾಡಿ, ನನ್ನ ಮೇಲೆ ಕ್ಷೇತ್ರದ ಜನತೆ ವಿಶ್ವಾಸವಿಟ್ಟಿದ್ದಾರೆ. ಕ್ಷೇತ್ರದ್ಯಾಂತ ಸಂಚಾರ ಮಾಡಿದ್ದು, ಜನತೆ ನನ್ನ ಮೇಲೆ ಒಲವು ತೋರಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು.
Comments