ರೈತರಿಗೆ ಬಂಪರ್ ಆಫರ್ ಕೊಟ್ಟ ಕುಮಾರಣ್ಣ..!!

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಆಯೋಜಿಸಿರುವ ವಿಕಾಸ ಪರ್ವ ಯಾತ್ರೆಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರನ್ನು ಸಂಶೋಧನೆಗಾಗಿ ಇಸ್ರೇಲ್ ಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಇಸ್ರೇಲ್ ನಲ್ಲಿ 200 ಸಂಶೋಧಕರನ್ನು ಭೇಟಿಯಾಗಿದ್ದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೃಷಿ ವಿಚಾರವನ್ನು ತಿಳಿದುಕೊಳ್ಳಲು ರೈತರನ್ನ ಇಸ್ರೇಲ್ ಗೆ ಕಳುಹಿಸುತ್ತೇನೆ ಎಚ್.ಡಿ. ಕುಮಾರಸ್ವಾಮಿ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನರು ಕಟ್ಟುವ ಹಣ ಸದ್ಬಳಕೆ ಮಾಡುತ್ತಿಲ್ಲ. ಜಾಹೀರಾತಿಗಾಗಿ 1 ಸಾವಿರ ಕೋಟಿ ರೂ. ಖರ್ಚು ಮಾಡಿದ್ದಾರೆ. ಟಿವಿ ಆನ್ ಮಾಡಿದ್ರೆ ಸಾಕು ಸರ್ಕಾರದ ಜಾಹೀರಾತು. ಜನರ ದುಡ್ಡು ದುಂದು ವೆಚ್ಚ ಮಾಡಿ ಜಾಹೀರಾತು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮೇ 12 ರಂದು ನೀವು ತೆಗೆದುಕೊಳ್ಳುವ ನಿರ್ಧಾರದಲ್ಲಿ 6.5 ಕೋಟಿ ಜನರ ಭವಿಷ್ಯ ಅಡಗಿದೆ. ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ಮುಖಂಡರು ಈ ಭಾಗದಲ್ಲಿ ಪ್ರವಾಸ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರವಾಸ ಹೊರಟಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ರೈತರ ಬಗ್ಗೆ, ನೀರಾವರಿ, ಉದ್ಯೋಗ ಸೃಷ್ಟಿ ಬಗ್ಗೆ ಗಮನಹರಿಸಿಲ್ಲ. ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
Comments