ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್ ಡಿಕೆ
ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ನಡೆದ ವಿಕಾಸಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. ಇದು ಪ್ರಜಾಪ್ರಭುತ್ವ. ಇಲ್ಲಿ ಯಾರು ಬೇಕಾದರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು ಎಂದರು. ಅಲ್ಲದೆ ರಾಜ್ಯದಲ್ಲಿರುವ ಪಕ್ಷಾಂತರ ಪರ್ವ ಇನ್ನೊಂದಿಷ್ಟು ದಿನ ನಡೆಯಲಿದೆ ಎಂದು ತಿಳಿಸಿದರು.
ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ನಾನು ಸ್ಪರ್ಧೆ ಮಾಡುವುದರಿಂದ ಹಣ ಹಾಗೂ ಸಮಯ ವ್ಯಯವಾಗಲಿದೆ ಎಂದು ಹೇಳಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಈಗಾಗಲೇ ವ್ಯಯ ಮಾಡಿರುವ ಹಣ ಹಾಗೂ ಸಮಯದ ಬಗ್ಗೆ ಈಗಾಗಲೇ ಅರಿತುಕೊಳ್ಳಲಿ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು. ಐದು ವರ್ಷದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಎರಡು ಉಪಚುನಾವಣೆ ನಡೆಸುವ ಪರಿಸ್ಥಿತಿಯನ್ನು ತಂದವರು ಯಾರು ಎಂದು ಪ್ರಶ್ನಿಸಿದ ಅವರು, ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಒಬ್ಬ ಅಭ್ಯರ್ಥಿಯನ್ನು ನಾನು ಗೆಲ್ಲಿಸಿರುವ ಉದಾಹರಣೆ ಇದೆ ಎಂದು ಹೇಳಿದರು. ನಾನು ಇದೇ ವೇಳೆ ಮಾಜಿ ಸಚಿವ ಬಸವರಾಜ ಹೊರಟ್ಟಿ ಕೊಠಡಿ ಸ್ಥಳಾಂತರ ಕುರಿತಂತೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಸ್ಪೀಕರ್ ಕೋಳಿವಾಡ ಉದ್ಧಟತನ ಮೆರೆದಿದ್ದಾರೆ ಎಂದು ಆರೋಪಿಸಿದರು.
Comments