ಸಿದ್ದರಾಮಯ್ಯ ವಿರುದ್ಧ ಬಾಂಬ್ ಸಿಡಿಸಿದ ಎಚ್ ಡಿಕೆ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತಚರ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನೀತಿ ಸಂಹಿತೆ ಜಾರಿ ನಡುವೆಯೂ ರಾಜ್ಯದ ಗುಪ್ತ ಮಾಹಿತಿಯನ್ನು ಇಂಟೆಲಿಜೆನ್ಸಿ ಇಲಾಖೆ ಅಧಿಕಾರಿಗಳಿಂದ ತರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡಿದ್ದಾರೆ. ವರುಣಾ, ಬಸವಕಲ್ಯಾಣ, ಗಂಗಾವತಿ, ಶಾಂತಿನಗರ ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಇಂಟೆಲಿಜೆನ್ಸಿಯಿಂದ ವರದಿ ಸಲ್ಲಿಕೆಯಾಗಿದೆ. ಗುಪ್ತಚರ ಇಲಾಖೆ ಅಧಿಕಾರಿಗಳು ಏ.5 ರಂದೇ ನೀಡಿರುವ ವರದಿ ಬಹಿರಂಗವಾಗಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಕುಮಾರಸ್ವಾಮಿ ಸೋಲಿಸುವುದು ನನಗೆ ಗೊತ್ತು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಾಂಗ್ರೆಸ್‍ನವರು ಇರುವುದು ನನಗೆ ವಿರೋಧ ಮಾಡುವುದಕ್ಕಾಗಿಯೇ ವಿನಃ ಚುನಾವಣೆಯಲ್ಲಿ ನನಗೆ ಬೆಂಬಲ ಕೊಡುವುದಕ್ಕೆ ಅಲ್ಲವೆಂದು ನನಗೆ ಗೊತ್ತಿಲ್ಲವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಯಾವ ಪಕ್ಷಗಳ ಬೆಂಬಲ ಪಡೆಯದೇ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವೆ. ಉತ್ತರ ಕರ್ನಾಟಕದಲ್ಲಿ 45 ಸ್ಥಾನ, ಹಳೆ ಕರ್ನಾಟಕದಲ್ಲಿ 75 ಸ್ಥಾನಗಳನ್ನು ಗೆದ್ದೇ ಗೆಲ್ಲುತೇವೆ. ನಮಗೆ ಯಾವ ಪಕ್ಷಗಳನ್ನು ಸೋಲಿಸುವ ಉದ್ದೇಶವಿಲ್ಲ. ನನಗೆ ನನ್ನ ಅಭ್ಯರ್ಥಿಗಳನ್ನು ಗೆಲ್ಲಿಸುವುದೊಂದೇ ಗುರಿ ಎಂದು ಭವಿಷ್ಯ ನುಡಿದರು.
Comments