ವಿಪಕ್ಷಗಳನ್ನು ತೊರೆದ ಪ್ರಭಾವಿ ಮುಖಂಡರು ಜೆಡಿಎಸ್ ಸೇರ್ಪಡೆ…!!
ಯಾದಗಿರಿ ನಗರದ ಬೈತುಲ್ ಮಹಲ್ ನಲ್ಲಿ ಹಮ್ಮಿಕೊಂಡಿದ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರ್ಪಡೆ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಗೆಲುವಿಗೆ ಶ್ರಮಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಿ ರೈತರ ಋಣ ತೀರಿಸುತ್ತೇವೆ, ರೈತರ ಹಾಗೂ ಜನಸಾಮಾನ್ಯರ ಹೇಳಿಗೆಗಾಗಿ ಶ್ರಮಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜಿಲ್ಲೆಯಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭಿವೃದ್ಧಿ ಕಾರ್ಯಾಗಳನ್ನು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸಿಬೇಕು ಎಂದರು. ಇದೆ ಸಂದರ್ಭದಲ್ಲಿ ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೊಡ್ಡಪ್ಪಗೌಡ ಕಳಗಿನಮನಿ, ಡಾ. ಶಫಿ ತುನ್ನೂರ,ಗುಂಡಪ್ಪ ಕಲಬುರ್ಗಿ, ಸೇರಿದಂತೆ ಅನೇಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
Comments