'ಕೈ' ಗೆ ಕೈ ಕೊಟ್ಟು, 'ಕಮಲ' ವನ್ನ ಕಮರಿಸಿ, 'ತೆನೆ' ಹೊತ್ತ ಮುಖಂಡರು..!!
ಕರ್ನಾಟಕ ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಹೆಚ್ಚುತ್ತಿದೆ. ರಾಷ್ಟ್ರೀಯ ಪಕ್ಷಗಳ ಹಲವು ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.
ಮಾಲೂರು ತಾಲ್ಲೂಕಿನ ಗೂಣೂರು ಕೂಪ್ಪ, ಅರಳೇರಿ, ದಿಗ್ಗುರು, ಮಾದನಹಟ್ಟಿ ಮತ್ತು ದೊಡ್ಡ ಇಗ್ಗಲೂರು ಗ್ರಾಮದ ಹಲವು ಮುಖಂಡರು ಕೆ.ಎಸ್.ಮಂಜುನಾಥಗೌಡರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ದಿನದಿಂದ ದಿನಕ್ಕೆ ಜೆಡಿಎಸ್ ಪ್ರಾಬಲ್ಯ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರ ವರ್ಚ್ಚಸ್ಸು ರಾರಾಜಿಸುತ್ತಿದೆ. ಇದಕ್ಕೆ ಸಾಕ್ಷಿ, ವಿಕಾಸ ಪರ್ವಕ್ಕೆ ಹರಿದು ಬಂದ ಜನ ಸಾಗರ. ಈ ಬಾರಿ ರಾಜ್ಯದೆಲ್ಲೆಡೆ ಜೆಡಿಎಸ್ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments