ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗೆ ಸೆಡ್ಡು ಹೊಡೆಯಲು ಸಜ್ಜಾದ ಜೆಡಿಎಸ್ ದಳಪತಿ..!!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆ ಈ ಬಾರಿ ರಾಜ್ಯದ ಗಮನ ಸೆಳೆಯುತ್ತಿರುವ ಪ್ರತಿಷ್ಠಿತ ಕ್ಷೇತ್ರ ಅಂದ್ರೆ ಅದು ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ. ಎಲ್ಲಾ ಪಕ್ಷದ ರಾಜಕೀಯ ನಾಯಕರು ಈಗಾಗಲೇ ಚುನಾವಣಾ ಪ್ರಚಾರದಲ್ಲಿ ತೊಡಗಲು ಸಜ್ಜಾಗುತ್ತಿದ್ದಾರೆ. ಇಲ್ಲಿ ಪಕ್ಷಗಳ ನಡುವೆ ನಡೆಯುವ ರಾಜಕೀಯಕ್ಕಿಂತಲೂ ಹೆಚ್ಚಾಗಿ ವ್ಯಕ್ತಿಗತವಾಗಿ ಪೊಲಿಟಿಕ್ಸ್ ಶುರುವಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ್ ಗೆ ಸೆಡ್ಡು ಹೊಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯವರು ತಮ್ಮ ಸ್ವಕ್ಷೇತ್ರ ರಾಮನಗರದ ಜೊತೆಗೆ ಚನ್ನಪಟ್ಟಣದಿಂದಲೂ ಈ ಬಾರಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಯವರ ಸ್ಪರ್ಧೆಯಿಂದಾಗಿ ಚನ್ನಪಟ್ಟಣದ ರಾಜಕಾರಣ ಈ ಬಾರಿ ರಾಜ್ಯದ ಗಮನಸೆಳೆಯುತ್ತಿರುವುದು ವಿ ವಿಶೇಷವಾಗಿದೆ.ಚನ್ನಪಟ್ಟಣ ಮಾಜಿ ಶಾಸಕ ಎಂ.ಸಿ.ಅಶ್ವಥ್ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ತಾಲ್ಲೂಕಿನ ಎಲ್ಲಾ ಜೆಡಿಎಸ್ ಮುಖಂಡರಲ್ಲೂ ಆತ್ಮವಿಶ್ವಾಸ ಹೆಚ್ಚಿದೆ. ನಾವು ಕೂಡ ನಾಳೆಯಿಂದಲೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು. ಹಾಗೇ ಈ ಬಾರಿ ಕುಮಾರಸ್ವಾಮಿಯವರು ಚನ್ನಪಟ್ಟಣದಲ್ಲಿ 25 ಸಾವಿರ ಹೆಚ್ಚಿನ ಮತಗಳಿಂದ ಗೆದ್ದು ಶಾಸಕರಾಗಲಿದ್ದಾರೆಂದು ಸ್ಪಷ್ಟಪಡಿಸಿದರು. ಇನ್ನು ಯೋಗೀಶ್ವರ್‌ರವರು ನಾನೇ ಗೆಲ್ಲುತ್ತೇನೆಂದು ಅಂದುಕೊಳ್ಳಲ್ಲಿ, ಅದೇ ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚಿನ ಮತಗಳು ಅವರ ಕಡೆಯಿಂದ ಬರಲಿವೆ ಎಂದು ಸಿ.ಪಿ.ಯೋಗೀಶ್ವರ್‌ಗೆ ಟಾಂಗ್ ನೀಡಿದರು.
Comments