'ಕೈ' ಬಿಟ್ಟು ‘ಹೊರೆ’ ಹೊರಲಿದ್ದಾರೆ ಈ ಪ್ರಭಾವಿ ನಾಯಕ…!!
ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದೆ. ಅನ್ಯ ಪಕ್ಷಗಳ ನಾಯಕರು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇನ್ನೂ ಹಲವು ನಾಯಕರು ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಮನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಪಿ.ನಾಗರಾಜ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ದಿನದಿಂದ ದಿನಕ್ಕೆ ಜೆಡಿಎಸ್ ಬಲ ಹೆಚ್ಚುತ್ತಿದ್ದು. ಈ ಬಾರಿ ಎಲ್ಲ ಕ್ಷೇತ್ರಗಳಲ್ಲೂ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments