ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ಮತ್ತೊಂದು ವಿಕೆಟ್ ಜೆಡಿಎಸ್ ತೆಕ್ಕೆಗೆ..!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದೆ. ಬಿಜೆಪಿ ಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಹಲವು ಮುಖಂಡರು ಬೇಸರಗೊಂಡು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಮುದ್ದೇಬಿಹಾಳದ ಬಿಜೆಪಿ ಪ್ರಬಲ ಟಿಕೆಟ್ ಆಕ್ಷಾಂಕ್ಷಿಯಾಗಿದ್ದ ಮಂಗಳಾದೇವಿ ಬಿರಾದಾರ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಿದ್ದು, ಈಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಎ. ಎಸ್. ಪಾಟೀಲ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆ ಯಡಿಯೂರಪ್ಪ ವಿರುದ್ದ ಮಂಗಳಾದೇವಿ ವಾಗ್ದಾಳಿ ನಡೆಸಿದ್ದರು. ಪಕ್ಷದ ಸಿದ್ಧಾಂತ ಗೊತ್ತಿರದ ನಡಹಳ್ಳಿಗೆ ಟಿಕೆಟ್ ನೀಡಿ ನಮಗೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ನಡಹಳ್ಳಿ ಅವರನ್ನು ಸೋಲಿಸಲು ಸಿದ್ದಳಾಗಿದ್ದೇನೆ ಎಂದು ಸವಾಲು ಹಾಕಿದ್ದರು. ಇನ್ನೆರಡು ದಿನದಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ ಹುಬ್ಬಳ್ಳಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಯವರ ನೇತೃತ್ವದಲ್ಲಿ ಮಂಗಳಾದೇವಿ ಶಾಂತಗೌಡ ಬಿರಾದಾರ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮುದ್ದೇಬಿಹಾಳದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments