'ಕೈ' ಬಿಟ್ಟ ಪ್ರಭಾವಿ ನಾಯಕನಿಗೆ ಅಧಿಕೃತ ‘ಹೊರೆ’ ಹೊರಿಸಿದ ದೇವೇಗೌಡ್ರು...!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಪಕ್ಷಾಂತರ ಪರ್ವ ಹೆಚ್ಚಾಗಿದ್ದು, ಅನ್ಯ ಪಕ್ಷಗಳ ನಾಯಕರು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರದ ಚುಕ್ಕಾಣೆ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಜೆಡಿಎಸ್, ತನ್ನ ಅಧಿಕಾರದ ಪ್ರಾಬಲ್ಯದಿಂದ ಅನ್ಯ ಪಕ್ಷಗಳ ಮುಖಂಡರು ತಮ್ಮತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.
ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಮತ್ತು ಅವರ ಸಂಘಡಿಗರು ಇಂದು ರಾಮನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.
Comments