ಕಾಂಗ್ರೆಸ್ ತೊರೆದ ಪ್ರಭಾವಿ ಮುಖಂಡ ಜೆಡಿಎಸ್ ಗೆ ಸೇರ್ಪಡೆ...!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿಪಕ್ಷಗಳ ನಾಯಕರು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.
ಪ್ರಭಾವಿ ಮುಖಂಡರಾದ ಸೋಮನಹಳ್ಳಿಯ ಸೋಮಣ್ಣನವರು ಇಂದು ಕಾಂಗ್ರೆಸ್ ತೊರೆದ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳ ಆಡಳಿತಕ್ಕೆ ಬೇಸತ್ತಿರುವ ಜನತೆ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ. ಇದಕ್ಕೆ ಸಾಕ್ಷಿ, ‘ವಿಕಾಸ ಪರ್ವ’ಕ್ಕೆ ಹರಿದು ಬರುತ್ತಿರುವ ಜನಸಾಗರ. ಅಲ್ಲದೆ ರಾಜ್ಯದೆಲ್ಲೆಡೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯವರ ವರ್ಚಸ್ಸುರಾರಾಜಿಸುತ್ತಿರುವುದು ಕಂಡು ಬರುತ್ತಿದೆ. ಕುಮಾರಸ್ವಾಮಿ ಯವರು ಹೋದಲ್ಲೆಲ್ಲಾ ಜನ ಸಾಗರ ಅರಿದು ಬರುತ್ತಿರುವುದೆ ಇದಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಜೆಡಿಎಸ್ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲೂ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments