ಸಿದ್ದರಾಮಯ್ಯನವರ ಪರಮಾಪ್ತರ ಚಿತ್ತ ಜೆಡಿಎಸ್ ನತ್ತ..!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದ ಕಾವು ಹೆಚ್ಚಿತ್ತಿದೆ. ಸಿಎಂ ಸಿದ್ದರಾಮಯ್ಯ ನವರ ಪರಮಾಪ್ತರಾದ ಪಿ.ರಮೇಶ್ ಇಂದು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಹೌದು.., ಸಿ.ವಿ.ರಾಮನ್ ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ , ಸಿಎಂ ಸಿದ್ದರಾಮಯ್ಯ ನವರ ಪರಮಾಪ್ತರಾದ ಪಿ.ರಮೇಶ್ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಕೆಸಿಆರ್ ಜತೆ ಮಾತುಕತೆ ನಡೆಸಿದ್ದ ಸಂದರ್ಭದಲ್ಲೇ ರಮೇಶ್ ಆಗಮಿಸಿದ್ರು. ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಇದೀಗ ಬಂಡಾಯದ ಕೂಗು ಕೇಳಿಬಂದಿದೆ.. ಕ್ಷೇತ್ರದಲ್ಲಿ ಕೈ ಟಿಕೆಟ್ ಗೆ ಪ್ರಬಲ ಅಕಾಂಕ್ಷಿಯಾಗಿದ್ದ, ಪಿ.ರಮೇಶ್ ಗೆ ಈ ಬಾರಿ ಟಿಕೆಟ್ ಮಿಸ್ ಆಗೋ ಸಾಧ್ಯತೆ ದಟ್ಟವಾಗಿದೆ. ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಗೆ ಹೈಕಮಾಂಡ್ ಟಿಕೆಟ್ ನೀಡೋದು ಬಹುತೇಕ ಫೈನಲ್ ಆಗಿದೆ. ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಗೆ ನಿಂತು ಗೆಲ್ಲಲೇ ಬೇಕು ಅಂತ ಪಣ ತೊಟ್ಟಿದ್ದ ಪಿ.ರಮೇಶ್ ಗೆ ನೀರಾಸೆಯಾಗಿದೆ. ಹೀಗಾಗಿ ಇವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಈ ಕುರಿತು ಅಧಿಕೃತವಾಗಿ ನಾಳೆ ಪಿ.ರಮೇಶ್ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments