ಬಿಜೆಪಿ ಯ ಪ್ರಭಾವಿ ನಾಯಕ ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆ...!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ಅನ್ಯ ಪಕ್ಷಗಳ ನಾಯಕರು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇನ್ನೂ ಹಲವು ನಾಯಕರು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭಾ ಚುನಾವಣೆಯ ಸಲುವಾಗಿ ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಇರದೇ ಇರುವ ಕಾರಣಕ್ಕಾಗಿ ಆರ್.ಆರ್ ನಗರದ ಮಾಜಿ ಕಾರ್ಪೊರೇಟರ್ ಹಾಗೂ ಚಿತ್ರ ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತು. ಆರ್.ಆರ್ ನಗರದ ಮಾಜಿ ಕಾರ್ಪೊರೇಟರ್ ಹಾಗೂ ಚಿತ್ರ ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅವರು ಇಂದು ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments