ಮೇ 1ರಂದು ಜೆಡಿಎಸ್ ಪರ ಪ್ರಚಾರ ಮಾಡಲಿದ್ದಾರೆ ಈ ಸ್ಟಾರ್ ನಟ…!!
ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ರಾಜಕೀಯ ಕಾವು ಹೆಚ್ಚಾಗುತ್ತಿದೆ. ಸ್ಟಾರ್ ಪ್ರಚಾರಕರು ಪಕ್ಷಗಳ ಪರ ಪ್ರಚಾರ ಮಾಡಲು ಸಜ್ಜಾಗಿದ್ದಾರೆ. ಈ ಬಾರಿಯ ಎಲೆಕ್ಷನ್ನಲ್ಲಿ ಟಾಲಿವುಡ್ ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರಕರಾಗಿ ಎಂಟ್ರಿಕೊಡ್ತಿದ್ದಾರೆ.
ಮೇ 1ರಂದು ಚಿಂತಾಮಣಿ ಕೋಲಾರ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಮುಳಬಾಗಿಲು, ಬಾಗೇಪಲ್ಲಿ ಯಲ್ಲಿ ಪ್ರಚಾರ ಮಾಡಲು ಸಜ್ಜಾಗಿದ್ದಾರೆ. ಪವನ್ ಕಲ್ಯಾಣ್ ಜೆಡಿಎಸ್ ಪರ ಪ್ರಚಾರಕ್ಕೆ ಧುಮುಕಲಿದ್ದು, ಇನ್ನು ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಕೂಡ ಜೆಡಿಎಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಈ ಎಲ್ಲ ಬೆಳವಣಿಗೆ ಅನುಸಾರ ಜೆಡಿಎಸ್ ದಿನದಿಂದ ದಿನಕ್ಕೆ ಪ್ರಬಲಗೊಳುತ್ತಿದ್ದು, ರಾಜ್ಯದೆಲ್ಲೆಡೆ ಜೆಡಿಎಸ್ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments