ಈ ಬಾರಿ ಜೆಡಿಎಸ್ ಸ್ವತಂತ್ರ ಸರ್ಕಾರ ರಚನೆ ಮಾಡಲಿದೆ : ಟಿ.ಎ.ಶರವಣ ಭವಿಷ್ಯ



ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುತ್ತದೆ ಎಂದು ಜೆಡಿಎಸ್ ಮುಖಂಡ ಟಿ.ಎ.ಶರವಣ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವುದೇ ಸಂದೇಹ ಇಲ್ಲ. ಈ ಬಾರಿ ನಮಗೆ 120 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ. ರಾಜ್ಯಾದ್ಯಂತ ಜನ ಜೆಡಿಎಸ್ ನತ್ತ ಒಲವು ತೋರಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಕರ್ನಾಟಕವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಎರಡೂ ಪಕ್ಷಗಳಿಂದ ಕರ್ನಾಟಕಕ್ಕೆ ಯಾವುದೇ ಲಾಭವಾಗಿಲ್ಲ. ಕಾಂಗ್ರೆಸ್ ಇಡೀ ರಾಜ್ಯವನ್ನೇ ಲೂಟಿ ಮಾಡಿದೆ ಎಂದು ಶರವಣ ಹೇಳಿದ್ದಾರೆ. ಈ ಬಾರಿ ಎರಡೂ ಪಕ್ಷಗಳನ್ನು ಸೋಲಿಸಿ ಜೆಡಿಎಸ್ ಸ್ವಂತ ಶಕ್ತಿಯಿಂದಲೇ ಸರ್ಕಾರ ರಚಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನ ವಿಕಾಸ ಪರ್ವ ಯಾತ್ರೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇಂಡಿಯಾ ಟುಡೆ ಸಮೀಕ್ಷೆ ದುಡ್ಡು ಕೊಟ್ಟು ಮಾಡಿಸಿದ ಸರ್ವೆ. ನಮಗೆ ಯಾವುದೇ ಸರ್ವೆ ಮೇಲೆ ನಂಬಿಕೆ ಇಲ್ಲ ಎಂದು ಜೆಡಿಎಸ್ ಮುಖಂಡ ಟಿ.ಎ ಶರವಣ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಪ್ಪನಾಣೆ ಎಂದು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಆದ್ರೆ ಅವರ ರಾಜಕೀಯ ಗುರು ದೇವೇಗೌಡ್ರು ಎಂಬುದನ್ನು ಮರೆತಿದ್ದಾರೆ ಎಂದು ಕುಟುಕಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಮುಕ್ತ ಕರ್ನಾಟಕ ರಚನೆಯಾಗಲಿದ್ದು, ಕುಮಾರಣ್ಣ ವಿಕಾಸ ಪರ್ವಕ್ಕೆ ಲಕ್ಷಾಂತರ ಜನ ಸೇರುತ್ತಿದ್ದಾರೆ. ಈ ಬಾರಿ ಜೆಡಿಎಸ್ ಸ್ವತಂತ್ರ ಸರ್ಕಾರ ರಚನೆ ಮಾಡುತ್ತದೆ ಎಂದು ಭವಿಷ್ಯ ನುಡಿದರು.
Comments