ಜೆಡಿಎಸ್ ಪಕ್ಷಕ್ಕೆ ಸಿಕ್ತು ಮತ್ತೊಂದು ಬೆಂಬಲ
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚನೆಯಾಗಬೇಕೆಂದು ಅಖಿಲ ಭಾರತ ಮಜ್ಲಿಸ್-ಇ-ಇಥೆಹಾದುಲ್ ಮುಸಲ್ಮಿನ್ (ಎಐಎಂಐಎಂ) ಜೆಡಿಎಸ್‍ಗೆ ಬೆಂಬಲಿಸಲು ನಿರ್ಧರಿಸಿದೆ. ಎಐಎಂಐಎಂ ನ ಸಂಸದ ಅಸಾದುದ್ದೀನ್ ಒವೈಸಿ ಜೆಡಿಎಸ್‍ಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರಿಂದ ಜೆಡಿಎಸ್‍ಗೆ ಮತ್ತೊಂದು ಪ್ರಾದೇಶಿಕ ಪಕ್ಷದ ಬೆಂಬಲ ಸಿಕ್ಕಂತಾಗಿದೆ.
ದೇವೇಗೌಡರಿಗೆ ಸಾಥ್ ನೀಡುವುದಾಗಿ ನಾನು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವೆ. ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದ ಅವರು, ದೇಶದ ಹಾಗೂ ಕರ್ನಾಟಕ ರಾಜ್ಯದ ಹಿತಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ. ಗುಣಮಟ್ಟದ ಅಭಿವೃದ್ಧಿಗಾಗಿ ಶ್ರಮಿಸುವ ನಾವು ಜೆಡಿಎಸ್‍ಗೆ ಬೆಂಬಲಿಸುತ್ತೇವೆ ನಮ್ಮ ಪಕ್ಷದಿಂದ ಕರ್ನಾಟಕದಲ್ಲಿ ಯಾವುದೇ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಅಭಿವೃದ್ಧಿ ಕಾರ್ಯದಲ್ಲಿ ವಿಫಲವಾಗಿವೆ. ಆದ್ದರಿಂದ ತಾವು ಜೆಡಿಎಸ್‍ಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಕೆಲವು ಕ್ಷೇತ್ರಗಳಲ್ಲಿ ಬಿಎಸ್‍ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇತ್ತೀಚೆಗಷ್ಟೇ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.
Comments