ಬಿಬಿಎಂಪಿ ಮಾಜಿ ಉಪಮೇಯರ್, ಕಾಂಗ್ರೆಸ್‍ನ ಹಿರಿಯ ಮುಖಂಡ ಜೆಡಿಎಸ್ ಗೆ ಸೇರ್ಪಡೆ...!!



ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವ ಕೂಡ ಹೆಚ್ಚುತ್ತಿದೆ. ಮಾಜಿ ಉಪಮೇಯರ್ ಹಾಗೂ ಕಾಂಗ್ರೆಸ್‍ನ ಹಿರಿಯ ಮುಖಂಡ ಪುಟ್ಟರಾಜು ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.
ಹೌದು..,ವಿ.ಸೋಮಣ್ಣ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಪುಟ್ಟರಾಜು ಅವರು ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್‍ನಲ್ಲಿನ ಕೆಲ ವಿದ್ಯಮಾನಗಳಿಂದ ಬೇಸತ್ತು ಅವರು ಜೆಡಿಎಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಇಂದು ಅಥವಾ ನಾಳೆ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಬಹುತೇಕ ಅವರಿಗೆ ಜೆಡಿಎಸ್ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿದೆ. ಈ ನಡುವೆ ಕಾಂಗ್ರೆಸ್‍ನ ಕೆಲ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪುಟ್ಟರಾಜು ಅವರು ಮಾತನಾಡಿ, ತಾವು ಪಕ್ಷ ತೊರೆಯುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಜೆಡಿಎಸ್ ಸೇರುವುದನ್ನು ಕೂಡ ಖಚಿತಪಡಿಸಿದ್ದಾರೆ.
Comments