'ಕೈ' ಪಕ್ಷದಲ್ಲಿ ಭುಗಿಲೆದ್ದ ಭಿನಮತ,ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ತೆಕ್ಕೆಗೆ…!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೇಟ್ ವಿಷಯದಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟಿದ್ದವು. ಈ ವಿಷಯವಾಗಿ ಅನೇಕ ಶಾಸಕರು ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳಿಗೆ ಸೇರಿಕೊಳ್ಳುತ್ತಿದ್ದಾರೆ.
ನಾಳೆ ಅಧಿಕೃತವಾಗಿ ಜೆಡಿಎಸ್ ಕಛೇರಿಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿಯ ಸದಸ್ಯರಾಗಿದ್ದ ರವಿ ಪಾಟೀಲ್ ಅವರು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ ಎಂಬ ಮಾಹಿತಿ ಈಗಾಗಲೇ ಲಭ್ಯವಾಗಿದೆ. ಮೊದಲು ಕಾಂಗ್ರೇಸ್ ಪಕ್ಷದಲ್ಲಿ ಇದ್ದು ಅದರ ನಡೆಯಿಂದ ಬೇಸತ್ತು ಈಗ ಕಾಂಗ್ರೇಸ್ ಪಕ್ಷವನ್ನು ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ. ಪ್ರಬಲ ಸಮುದಾಯದ ನಾಯಕರಾಗಿರುವದ ರವಿ ಪಾಟೀಲ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಿರುವುದು ಜೆಡಿಎಸ್ ಗೆ ಸಾಕಷ್ಟು ಬೆಂಬಲ ಸಿಕ್ಕಂತೆ ಆಗಿದೆ. ಇನ್ನೂ ಈ ರವಿ ಪಾಟೀಲ್ ಸತೀಶ್ ಜಾರಕಿಹೋಳಿಯವರ ಅಳಿಯನಾಗಿದ್ದು ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments