ಕಾಂಗ್ರೆಸ್ ನ ಮಾಜಿ ಶಾಸಕ ಜೆಡಿಎಸ್ ಗೆ..!!

ಕರ್ನಾಟಕ ವಿಧಾಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿ ಜೆ ಪಿ ಪಟ್ಟಿ ಬಿಡುಗಡೆ ಮಾಡಿರುವ ಹಿನ್ನಲೆ ಪಕ್ಷಾಂತರ ಪರ್ವ ಇನ್ನು ಹೆಚ್ಚಾಗಿದ್ದು, ಹಲವು ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನ ಮಾಜಿ ಶಾಸಕ ಬಿ. ಪ್ರಸನ್ನ ಕುಮಾರ್ ಅವರು ಪದ್ಮನಾಭ ನಗರದ ಕಾಂಗ್ರೆಸ್ ಟಿಕೆಟ್ ಮೀಸ್ ಆಗಿದ್ದು, ಅವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಹೌದು, ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ, ಪಕ್ಷ ಸೇರುವ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ಅಂತಿಮ ನಿರ್ಣಯ ಹೊರಬರಬೇಕಿದೆ.
Comments