ಸಚಿವ ಡಿವಿ ಸದಾನಂದ ಗೌಡನವರ ಆಪ್ತರ ಚಿತ್ತ ಜೆಡಿಎಸ್ ನತ್ತ…!!
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.
ಪುತ್ತೂರು ಕ್ಷೇತ್ರದಿಂದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡಿರುವುದರ ವಿರುದ್ದ ಬಿಜೆಪಿ ಮುಖಂಡ ಹಾಗು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಆಪ್ತ ಅಶೋಕ್ ಕುಮಾರ್ ರೈ ಕಾರ್ಯಕರ್ತರು ಬಂಡಾಯವೆದ್ದಿದ್ದಾರೆ. ಬಿಜೆಪಿಯ ಈ ನಡೆಗೆ ಬೇಸತ್ತಿರುವ ಇವರು ಜೆಡಿಎಸ್ ನತ್ತ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಕುಮಾರ್ ರೈ ಅವರ ಜತೆ ನೇರ ದೂರವಾಣಿ ಕರೆ ಮಾಡಿ ಮಾತಾಡಿರುವ ಜೆಡಿಎಸ್ ರಾಜ್ಯಾಧ್ಯಕ ಎಚ್.ಡಿ ಕುಮಾರಸ್ವಾಮಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಮುಂದಿನ ಚುನಾವಣೆಗೆ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಪುತ್ತೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾದರೆ ಟಿಕೆಟ್ ನೀಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments