ಸ್ಯಾಂಡಲ್ ವುಡ್ ನ ಈ ಸ್ಟಾರ್ ನಟ ಜೆಡಿಎಸ್ ಗೆ ಸೇರ್ಪಡೆ...!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಹಲವು ಅನ್ಯ ಪಕ್ಷದ ನಾಯಕರು, ನಟ-ನಟಿಯರು ಜೆಡಿಎಸ್ ನತ್ತ ವಲಸೆ ಬರುತ್ತಿದ್ದಾರೆ. ಮಾಜಿ ಸಂಸದ ಹಾಗೂ ಚಲನಚಿತ್ರ ನಟ ಶಶಿಕುಮಾರ್ ಅವರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಶಶಿಕುಮಾರ್ ಜೆಡಿಎಸ್ ಸೇರಿದರು. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಿದ ಶಶಿಕುಮಾರ್ ಅವರ ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Comments