‘ಕೈ’ ಪಕ್ಷ ಬಿಟ್ಟ ಹಾಲಿ ಶಾಸಕ ಜೆಡಿಎಸ್ ಗೆ ಸೇರ್ಪಡೆ..!!
ರಾಜ್ಯ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ತರೀಕೆರೆ ಹಾಲಿ ಶಾಸಕ ಜಿ.ಹೆಚ್. ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶ್ರೀನಿವಾಸ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀನಿವಾಸ್ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ. ಇದರಿಂದಾಗಿ ಶ್ರೀನಿವಾಸ್ ಅವರು ಕೈಗೆ ಗುಡ್‌ಬೈ ಹೇಳಿ ಜೆಡಿಎಸ್ ಸೇರಿದರು.
Comments