'ಕೈ' ಬಿಟ್ಟ ಪ್ರಭಾವಿ ನಾಯಕನಿಗೆ ಅಧಿಕೃತ 'ಹೊರೆ' ಹೊರೆಸಿದ ಕುಮಾರಣ್ಣ



ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಳಿಯ ರವಿ ಪಾಟೀಲ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರವಿ ಪಾಟೀಲ್ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಳಿಯ ರವಿ ಪಾಟೀಲ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
Comments