A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಮೂಡಬಿದ್ರೆ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ? | Civic News

ಮೂಡಬಿದ್ರೆ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?

20 Apr 2018 10:08 AM |
6831 Report

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ರಂಗೇರುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಹೋರಾಟಕ್ಕೆ ವೇದಿಕೆಯಾಗಲಿದೆ. ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಆಭ್ಯರ್ಥಿ ಕಣಕ್ಕಿಳಿಸಲಿದ್ದು ಇಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೀವನ್ ಶೆಟ್ಟಿ ಆಯ್ಕೆಯಾಗಿದ್ದರೆ. ಈ ಹಿಂದೆ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. ಆದರೆ ಈ ಬಾರಿ ಅಮರನಾಥ ಶೆಟ್ಟಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಕಾರಣ ಮುಲ್ಕಿಯ ಖ್ಯಾತ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ. ವಾಸ್ತು ಪ್ರಕಾರ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜೀವನ್ ಶೆಟ್ಟಿ , ವಾಣಿಜ್ಯ, ವಸತಿ, ಹೋಟೆಲ್ ಸಂಕಿರ್ಣ ಸೇರಿದಂತೆ ದೇವಾಲಯಗಳ ನಿರ್ಮಾಣದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷದಲ್ಲಿರುವ ಬಂಡಾಯ, ಗೊಂದಲದ ಸ್ಥಿತಿಯನ್ನು ಜೆಡಿಎಸ್ ಯಾವ ರೀತಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Edited By

Shruthi G

Reported By

hdk fans

Comments