ಸಾವಿರಾರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ ನಾಮಪತ್ರ ಸಲ್ಲಿಕೆ
ದೊಡ್ಡಬಳ್ಳಾಪುರದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ವೆಂಕಟರಮಣಯ್ಯ ಚುನಾವಣಾಧಿಕಾರಿ ಡಾ.ರಾಜೇಂದ್ರಪ್ರಸಾದ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ತಾಲ್ಲೂಕು ಕಛೇರಿ ಸರ್ಕಲ್ ನಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಆರ್.ಜಿ.ವೆಂಕಟಾಚಲಯ್ಯ ಪ್ರತಿ ಪಕ್ಷದ ಅಭ್ಯರ್ಥಿಗಳು ಈ ಬಾರಿ ಪ್ರಭಲರಾಗಿದ್ದಾರೆ ಹಾಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಲು ಕರೆನೀಡಿದರು, ಗ್ರಾ.ಬ್ಲಾಕ್ ಅಧ್ಯಕ್ಷ ಬೈರೇಗೌಡ, ನಗರ ಅಧ್ಯಕ್ಷ ಅಶೋಕ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ಜಿಪಂ ಸದಸ್ಯ ಚುಂಚೇಗೌಡ, ಕೆಪಿಸಿಸಿ ಸದಸ್ಯ ಶ್ರೀನಿವಾಸ್, ಲಕ್ಷ್ಮೀಪತಿ, ಮೀನಾಕ್ಷಿ ಕೆಂಪಣ್ಣ, ರಂಗರಾಜು,ಪ್ರಕಾಶ್, ಆದಿತ್ಯ ನಾಗೇಶ್ ಹಾಜರಿದ್ದರು.
Comments