ಕುಮಾರಣ್ಣನ ಪರ ಪ್ರಚಾರ ಮಾಡಿದ ಸ್ಯಾಂಡಲ್ ವುಡ್ ಬೆಡಗಿ..!!



ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಹಲವು ಸ್ಯಾಡಲ್‍ವುಡ್ ನಟ ನಟಿಯರು ತಮ್ಮ ನೆಚ್ಚಿನ ರಾಜಕೀಯ ನಾಯಕರ ಪರ ಪ್ರಚಾರ ನಡೆಸುತ್ತಾರೆ. ಸದ್ಯ ಈ ಸಾಲಿನಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ.
ಮತದಾನ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ಡಿಂಪಲ್ ಬೆಡಗಿ ರಚಿತಾ ರಾಮ್ ಕರ್ನಾಟಕ ಅಭಿವೃದ್ಧಿ ಕಡೆ ನಡೆಯಲು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ತಮ್ಮ 20 ತಿಂಗಳ ಆಡಳಿತ ಅವಧಿಯಲ್ಲಿ ಮಾಡಿರುವ ಸಾಧನೆ ಉದಾಹರಣೆಯಾಗಿದೆ. ರಾಜ್ಯದಲ್ಲಿ ರೈತರ ಪರ ಹೋರಾಟ ನಡೆಸುವ ನಾಯಕರ ಅಗತ್ಯವಿದ್ದು, ಕುಮಾರ ಸ್ವಾಮಿಯವರು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕ ಭವಿಷ್ಯಕ್ಕಾಗಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಬಹಳ ಮುಖ್ಯವಾಗಿದ್ದು, ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.
Comments