‘ಕೈ’ ಪಕ್ಷದ ಪ್ರಭಾವಿ ಹಿರಿಯ ಮುಖಂಡ ಜೆಡಿಎಸ್ ಗೆ ಸೇರ್ಪಡೆ….!!

ದೊಡ್ಡಬಳ್ಳಾಪುರ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಹಿರಿಯ ಮುಖಂಡ ಸಿ.ಡಿ.ಸತ್ಯನಾರಾಯಣ ಗೌಡ ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ .
ತಾಲೂಕಿನಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇಲ್ಲದ ಸಂದರ್ಭದಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಯುವಕರಿಗೆ ಪ್ರಚಾರ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬೆಳವಂಗಲ ಮಹೇಶ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ನಡುವೆ ತಾಲೂಕಿನಲ್ಲಿ ಸಾಕಷ್ಟು ಮುಖಂಡರು ವಿವಿಧ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ವಲಸೆ ಬರುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡು ಪ್ರಚಾರದ ಭರಾಟೆ ತೀವ್ರವಾಗುತ್ತಲೇ ಇನ್ನು ಅನೇಕ ಜನ ಮುಖಂಡರ ಪಕ್ಷಾಂತರಗಳು ನಡೆಯಲಿವೆ ಎನ್ನುವ ನಿರೀಕ್ಷೆಗಳು ಇವೆ.
Comments