ಕಾಂಗ್ರೆಸ್ ಗೆ ಬಿಗ್ ಶಾಕ್, ಮತ್ತೊಂದು ವಿಕೆಟ್ ಜೆಡಿಎಸ್ ತೆಕ್ಕೆಗೆ...!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ವಿಪಕ್ಷಗಳ ನಾಯಕ-ನಾಯಕಿಯರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಹಲವು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇನ್ನೂ ಹಲವು ಮುಖಂಡರು ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿರಾಜಪೇಟೆ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪದ್ಮಿನಿ ಪೊನ್ನಪ್ಪ ಪಕ್ಷ ತ್ಯಜಿಸಲು ಮುಂದಾಗಿದ್ದು, ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪದ್ಮಿನಿ ಪೊನ್ನಪ್ಪ, ನನ್ನನ್ನು ಭೇಟಿ ಮಾಡಲು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಬಂದಿದ್ದರು. ಈ ವೇಳೆ ಜೆಡಿಎಸ್ ಪಕ್ಷ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದರು. ಜೆಡಿಎಸ್ ಸೇರುವಂತೆ ನನಗೆ ಆಹ್ವಾನ ನೀಡಿದಕ್ಕೆ ಅಪ್ಪಾಜಿ, ಕುಮಾರಣ್ಣ ಹಾಗೂ ಸಂಕೇತ್ ಪೂವಯ್ಯ ಗೆ ಧನ್ಯವಾದಗಳು ಹೇಳಿದ್ದಾರೆ. ಜೆಡಿಎಸ್ ಸೇರ್ಪಡೆ ಕುರಿತು ನನ್ನ ಕುಟುಂಬ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿ 2 ದಿನಗಳ ಒಳಗಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಅಲ್ಲದೇ ಅವರ ಭಾವನೆಗಳಿಗೆ, ನಿರ್ಧಾರಗಳಿಗೆ ಬೆಲೆಕೊಡಬೇಕಾದದು ನನ್ನ ಧರ್ಮ ಎಂದು ತಿಳಿಸಿದರು .
Comments