ಶಿಡ್ಲಘಟ್ಟ ಕ್ಷೇತ್ರಕ್ಕೆ ಬದಲಾದ ಜೆಡಿಎಸ್ ಅಭ್ಯರ್ಥಿ...!!

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಪಡೆದಿದ್ದ ಹಾಲಿ ಶಾಸಕ ರಾಜಣ್ಣ ಬದಲಾಗಿ ಮೇಳೂರು ರವಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರವಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಿಡ್ಲಘಟ್ಟ ಕ್ಷೇತ್ರಕ್ಕೆ ಈ ಮೊದಲು ಜೆಡಿಎಸ್ ನಿಂದ ಹಾಲಿ ಶಾಸಕ ರಾಜಣ್ಣ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ ಮಹತ್ತರ ಬೆಳವಣಿಗೆ ಮೇರೆಗೆ ರವಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲು ಬಂದಿದ್ದ ಹಾಲಿ ಶಾಸಕ ರಾಜಣ್ಣ ಬದಲಿಗೆ ಮೇಳೂರು ರವಿ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಿದ್ದಾರೆ.
Comments