ಬಿಜೆಪಿ ಅಭ್ಯರ್ಥಿ ನರಸಿಂಹಸ್ವಾಮಿಯವರಿಂದ ನಾಮ ಪತ್ರ ಸಲ್ಲಿಕೆ







ಇಂದು ದೊಡ್ಡಬಳ್ಳಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ಜೆ. ನರಸಿಂಹಸ್ವಾಮಿಯವರು ಸಹಸ್ರಾರು ಮಂದಿ ಬೆಂಬಲಿಗರೊಂದಿಗೆ ಆಗಮಿಸಿ ತಾಲ್ಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಡಾ.ರಾಜೇಂದ್ರಪ್ರಸಾದ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ನಗರದ ನೆಲದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯ ಮುಖಾಂತರ ತಾಲ್ಲೂಕು ಕಛೇರಿಗೆ ಆಗಮಿಸಿ ನಾಮ ಪತ್ರ ಸಲ್ಲಿಸಿದರು. ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಹನುಮಂತರಾಯಪ್ಪ, ಮಾಜಿ ನಗರಸಭಾಧ್ಯಕ್ಷ ಮುದ್ದಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಲಕ್ಷ್ಮೀಪತಿ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರ್ ಹಾಗೂ ಮಹಿಳಾ ಮೋರ್ಚಾ ಮುಖಂಡರಾದ ಶ್ರೀಮತಿ ವತ್ಸಲ, ಲೀಲಾಮಹೇಶ್, ಪುಷ್ಪ ಶಿವಶಂಕರ್, ಉಮಾ ಮಹೇಶ್ವರಿ, ಗಿರಿಜ, ಕಮಲ, ದಾಕ್ಷಾಯಿಣಿ ಮತ್ತು ತಾಲ್ಲೂಕಿನ ಎಲ್ಲ ಬಿಜೆಪಿ ಮುಖಂಡರು ಹಾಜರಿದ್ದರು.
Comments