ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ತೆಕ್ಕೆಗೆ..!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ಯ ಪಕ್ಷಗಳ ನಾಯಕರು ಜೆಡಿಎಸ್ ನತ್ತ ವಲಸೆ ಬರುತ್ತಿದ್ದಾರೆ.
ಕ್ಷೇತ್ರದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಬಿಜೆಪಿ ಹಿಂದುಳಿದ ವರ್ಗದ ಕಾರ್ಯ ಕಾರಿಣಿ ಸಮಿತಿ ಸದಸ್ಯ ಆರ್.ಮಂಜುನಾಥ್ ಬಿಜೆಪಿ ತೊರೆದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸೇರಿದರು. ಬೆಂಗಳೂರಿನ ಜೆಡಿಎಸ್ ಕಛೇರಿ ಜೆ.ಪಿ. ಭವನದಲ್ಲಿ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಸಮ್ಮುಖದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುತ್ತದೆ ಎಂದು ಪ್ರಬಲ ಟಿಕೆಟ್ ಆಕಾಂಕ್ಷೆ ಹೊಂದಿದ್ದ ಇವರು ಜ.20 ರಂದು ಪರಿವರ್ತನಾ ರ್ಯಾಲಿ ಕಾರ್ಯಕ್ರಮ ಸೇರಿದಂತೆ ಬೆಂಗಳೂರು, ಮೈಸೂರು, ಚಾ.ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಕಾರ್ಯಕ್ರಮಗಳ ಸಂಪೂರ್ಣ ಜವಾಬ್ದಾರಿ ಹೊತ್ತು ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದ್ದರು.
ಜಿಲ್ಲೆಯ ಗಡಿ ಹಾಗೂ ಹಿಂದುಳಿದಿರುವ ಹನೂರು ಕ್ಷೇತ್ರದ ಅಭಿವೃದ್ದಿಗಾಗಿ ಮತ್ತು ಕುಟುಂಬ ರಾಜಕಾರಣ ಕೊನೆಗೊಳಿಸಲು ಕಾರ್ಯಕರ್ತರು ಮುಖಂಡರ ಜೊತೆಗೂಡಿ ಮಾಜಿ ಸಚಿವ ವಿ.ಸೋಮಣ್ಣನವರನ್ನು ಕ್ಷೇತ್ರಕ್ಕೆ ಕರೆತಂದು ಬಿಜೆಪಿ ಪಕ್ಷದ ಅಭ್ಯರ್ಥಿ ಮಾಡಿ ಅವರಿಗೆ ಸಂಪೂರ್ಣ ಬೆಂಬಲ ನೀಡಲು ಮುಂದಾಗಿದ್ದರು. ಅದರೆ ಮಾಜಿ ಸಚಿವ ವಿ.ಸೋಮಣ್ಣನಿಗೆ ಬಿಜೆಪಿ ಟಿಕೆಟ್ ನಿರಾಕಸಿತ್ತು. ಆಗ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ದೊರೆಯುತ್ತದೆ ಎಂಬ ವಿಶ್ವಾಸದಿಂದ ಇದ್ದರೂ ಇವರಿಗೂ ನಿರಾಕರಣೆ ಆದ ಹಿನ್ನೆಲೆಯಲ್ಲಿ ಕಾರ್ಯಕರ್ತರ ನಿರ್ಧಾರ ಹಾಗೂ ಒತ್ತಾಯಕ್ಕೆ ಮಣಿದು ಬಿಜೆಪಿ ತೊರೆದಿದ್ದಾರೆ.
Comments