ಅಪ್ಪ-ಮಗನ ಭಾವುಕತೆಗೆ ಸಾಕ್ಷಿಯಾಯ್ತು…ಚುನಾವಣಾ ಪ್ರಚಾರ
ಚುನಾವಣಾ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಸ್ಥರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಗೌಡ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ.
ಕುಣಿಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಅಪ್ಪ, ಮಗ ಭಾವುಕರಾಗಿ ಅಪ್ಪಿಕೊಂಡ ಪ್ರಸಂಗ ನಡೆಯಿತು. ಕುಮಾರಸ್ವಾಮಿ ಹಾಗೂ ನಿಖಿಲ್‍ಕುಮಾರ್ ಇಬ್ಬರೂ ಸಹ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಮಮತೆಯಿಂದ ಮಗನ ಮುಖದ ಮೇಲೆ ಕೈಯಾಡಿಸಿದರು. ಈ ಸನ್ನಿವೇಶಕ್ಕೆ ಅಪರೂಪದ ಚಿತ್ರಗಳೇ ಸಾಕ್ಷಿಯಾಗಿವೆ. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಗಲಿ ಎಂದು ನಿಖಿಲ್ ಗೌಡ ಅವರು ಪ್ರಚಾರಕ್ಕಿಳಿದಿದ್ದಾರೆ. ಅಂತೆಯೇ ಜೆಡಿಎಸ್ ಪರ ರಾಜ್ಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.
Comments