ಹೆಣ್ಣು ಮಕ್ಕಳಿಗೆ ರಾಜಕೀಯ ಅವಕಾಶ ಕಲ್ಪಿಸಿದ್ದು ಕಾಂಗ್ರೇಸ್-ಮುರುಳೀಧರ್ ಹಾಲಪ್ಪ







ಕೊರಟಗೆರೆ ಏ. :- ಹೆಣ್ಣು ಮಕ್ಕಳು ಅಡುಗೆ ಮನೆಯನ್ನು ಬಿಟ್ಟು ಹೊರ ಬಂದು ಸಮಾಜಕ್ಕೆ ತಮ್ಮ ಸಾಮತ್ಯವನ್ನು ತೋರಿಸಬೇಕು ಎಂದು ಕೌಶಲ್ಯಾಭಿವೃದ್ಧಿ ನಿಮಗದ ಅಧ್ಯಕ್ಷ ಮುರುಳೀಧರ್ ಹಾಲಪ್ಪ ತಿಳಿಸಿದರು.
ಕೊರಟಗೆರೆ ಪಟ್ಟಣದಲ್ಲಿನ ಗುಂಡಾಜನೇಯಸ್ವಾಮಿ ದೇವಾಲಯದಲ್ಲಿ ಮಹಿಳಾ ಒಕ್ಕೂಟದ ಸದಸ್ಯಗಳನ್ನು ಉದ್ದೇಶಿ ಮಾತನಾಡಿದರು.
ಹೆಣ್ಣು ಹುಟ್ಟಿನಿಂದಲೂ ಶೋಷಿತಳಾಗುತ್ತಿದ್ದಾಳೆ ಇದನ್ನು ತಪ್ಪಿಸಲು ಕಾಂಗ್ರೇಸ್ ಸರ್ಕಾರ ಹೆಣ್ಣು ಮಕ್ಕಳಿಗೆಂದು ವಿಶೇಷ ಪ್ಯಾಕೇಜ್ ಗಳನ್ನು ನೀಡಿ ಸ್ವತಂತ್ರ ಬಂದಾಗಿನಿಂದಲೂ ರಾಜಕೀಯವಾಗಿ ಅವಕಾಶ ಮಾಡಿಕೊಟ್ಟಿರುವ ಶ್ರೇಯ ಕಾಂಗ್ರೇಸ್ ಪಕ್ಷಕ್ಕೆ ಸಲ್ಲುತ್ತದೆ ಎಂದರು.
ಈ ಭಾರಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು ಎಲ್ಲರೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ ಪರಮೇಶ್ವರ್ ಸ್ಪರ್ಧಿಸುತ್ತಿರುವುದರಿಂದ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಅನೇಕ ಕೌಶಲ್ಯ ತರಬೇತಿಯನ್ನು ಒದಗಿಸುತ್ತಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು, ಎಲ್ಲಾ ರಂಗಗಳಲ್ಲಿಯೂ ಅಭಿವೃದ್ಧಿಗೆ ಹೊಂದಿಕೊಳ್ಳುವುದರ ಜೊತೆಗೆ, ಕೌಶಲ್ಯ ತರಬೇತಿ ಪಡೆದು ಸ್ವಯಂ ಉದ್ಯೋಗಗಳನ್ನು ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುವತ್ತಾ ಕಾಳಜಿ ವಹಿಸಬೇಕು. ಸಮಾಜದಲ್ಲಿ ಉತ್ತಮವಾದ ಬದಲಾವಣೆ ಕಾಣಬೇಕಾದರೆ, ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳುವುದರ ಜೊತೆಗೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಇಂದಿನ ವಿಶಾಲವಾದ ಜಗತ್ತಿನಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಪ್ರಬಲಳಾಗಿದ್ದು, ದೇಶ ಕಟ್ಟವುದರ ಜೊತೆಗೆ ದೇಶದ ಚುಕ್ಕಾಣಿ ಹಿಡಿಯುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾಳೆ. ಹೆಣ್ಣು ಅಡುಗೆ ಮನೆಗೆ ಸೀಮಿತವಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾಳೆ. ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆ, ಇಡೀ ಜಗತ್ತು ಸುತ್ತುತ್ತಿದ್ದಾಳೆ ಎಂದರು.
ರಾಜಕೀಯ, ಸಾಹಿತ್ಯ, ತಂತ್ರಜ್ಞಾನ, ಬಾಹ್ಯಾಕಾಶ ಸೇರಿದಂತೆ ಎಲ್ಲ ರಂಗಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ.ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲಗುರು ಎನ್ನುವಂತೆ ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕಲಿಸುವ ಗುರುತರ ಜವಾಬ್ದಾರಿಯನ್ನು ಮಹಿಳೆ ಹೊಂದಿದ್ದಾಳೆ. ಯಾವುದೇ ಒಬ್ಬ ಪುರುಷನ ಯಶಸ್ಸಿನ ಹಿಂದೆ ಹೆಣ್ಣಿನ ಶ್ರಮ ಅಡಗಿರುತ್ತದೆ ಎಂಬುದನ್ನು ಅಲ್ಲಗೆಳೆಯುವಂತಿಲ್ಲ. ಆಧುನಿಕ ಯುಗದಲ್ಲಿ ಮಹಿಳೆಯರು, ಪುರುಷರಂತೆ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿ, ನ್ಯಾಯಾಧೀಶರು, ಪತ್ರಕರ್ತೆ, ಎಂಜಿನಿಯರ್, ಸಂಗೀತ, ಸಾಹಿತ್ಯ, ವಿಜ್ಞಾನ, ದೇಶದ ರಾಷ್ಟ್ರಪತಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಕೀರ್ತಿ ಮಹಿಳೆಗೆ ಸಲ್ಲುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಕಾಂಗ್ರೇಸ್ ಪಕ್ಷ ಈ ಭಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು ಎಲ್ಲರೂ ಕಾಂಗ್ರೆಸ್ ಪಕ್ಷದ ನಮ್ಮೆಲ್ಲರ ಅಚ್ಚುಮೆಚ್ಚಿನ ಅಭ್ಯರ್ಥಿಯಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ವಿಜಯಯಾತ್ರೆ ಅಧ್ಯಕ್ಷರ ಕ್ಷೇತ್ರದಿಂದಲೇ ಪ್ರಾರಂಭಿಸಲಿ ಎಂದರು.
ಸಭೆಯಲ್ಲಿ ತಾಲೂಕು ಮಹಿಳಾ ಅಧ್ಯಕ್ಷೆ ಜಯಮ್ಮ ಮು
Comments