ಜೆಡಿಎಸ್‌ನ ಸ್ಟಾರ್ ಕ್ಯಾಂಪೇನರ್ ಗಳ ವಿವರ...ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

ಜೆಡಿಎಸ್‌ನ ಸ್ಟಾರ್ ಕ್ಯಾಂಪೇನರ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಪ್ರಮುಖವಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಲಿದ್ದಾರೆ ಎನ್ನಲಾಗಿದೆ.ಭಾರತದ ಚುನಾವಣಾ ಆಯೋಗದಿಂದ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗುವ ತಾರಾ ಪ್ರಚಾರಕರಿಗಾಗಿ ಜೆಡಿಎಸ್ ಅನುಮತಿ ಪಡೆದಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ.ಕುಮಾರಸ್ವಾಮಿ, ಪಕ್ಷದ ರಾಷ್ಟ್ರೀಯ ಮಹಾಪ್ರಧಾನಕಾರ್ಯದರ್ಶಿ ಡ್ಯಾನಿಷ್ ಆಲಿ, ಬಿ.ಎಂ.ಫಾರೂಕ್, ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿ, ಬಿ.ಬಿ.ನಿಂಗಯ್ಯ, ಬಂಡೆಪ್ಪ ಕಾಶಂಪೂರ್, ಎಚ್.ವಿಶ್ವನಾಥ್ ಅವರು ತಾರಾ ಪ್ರಚಾರಕರಾಗಿದ್ದಾರೆ. ನಟ ನಿಖಿಲ್ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ, ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಗೀತಾ ಶಿವರಾಜ್‍ಕುಮಾರ್, ವಿಧಾನ ಪರಿಷತ್ ಸದಸ್ಯರಾದ ರಮೇಶ್‍ಬಾಬು, ಕೆ.ಟಿ.ಶ್ರೀಕಂಠೇಗೌಡ, ಕಾಂತರಾಜು, ಟಿ.ಎ.ಶರವಣ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಸೇರಿದಂತೆ ಪಕ್ಷದ ಹಲವು ಮುಖಂಡರು ತಾರಾ ಪ್ರಚಾರಕರಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
Comments