'ಕೈ' ಪಕ್ಷಕ್ಕೆ ಬಿಗ್ ಶಾಕ್, 'ತೆನೆ' ಹೊತ್ತ 'ಕೈ' ನಾಯಕರು...!!

27 Apr 2018 3:48 PM |
15205 Report

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವವೂ ಕೂಡ ನಿರಂತರವಾಗಿದೆ. ಪಕ್ಷದಿಂದ ಪಕ್ಷಕ್ಕೆ ನಾಯಕರ ವಲಸೆ ಹೆಚ್ಚಾಗುತ್ತಿದೆ. ಒಂದು ಪಕ್ಷವನ್ನು ಬಿಟ್ಟು ಇನ್ನೊಂದು ಪಕ್ಷದ ಕೈ ಹಿಡಿಯುವ ಮೂಲಕ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆ.

ಇದೀಗ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜೆಡಿಎಸ್ ನ ಜಿ.ಟಿ ದೇವೇಗೌಡರ ಪ್ರಭಲ ಪೈಪೋಟಿಗೆ ಸಾಕ್ಷಿಯಾಗಲಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೂ ಇಂತಹ ಪಕ್ಷಾಂತರಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ಬೆಳವಾಡಿ ಗ್ರಾಮದಲ್ಲಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಜೆಡಿಎಸ್ ಕೈ ಹಿಡಿದಿದ್ದಾರೆ. ಸುಮಾರು 50ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಹಾಗೂ ಶಾಸಕ ಜಿಟಿ ದೇವೇಗೌಡ ನೇತೃತ್ವದಲ್ಲಿ ಪಕ್ಷವನ್ನು ಸೇರಿದ್ದಾರೆ. ಇಲ್ಲಿ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡರು ಜೆಡಿಎಸ್'ನತ್ತ ಜನರನ್ನು ಸೆಳೆಯುವ ಯತ್ನದಲ್ಲಿ ಬಿಗ್ ಆಪರೇಷನ್ ನಡೆಸುತ್ತಿದ್ದಾರೆ.

Edited By

Shruthi G

Reported By

hdk fans

Comments