ರಾಮನಗರ : ತಂದೆ ಪರ ಅಬ್ಬರದ ಪ್ರಚಾರ ಮಾಡಿದ ನಿಖಿಲ್
ರಾಮನಗರದಲ್ಲಿ ಎಚ್.ಡಿ.ಕುಮಾರಸ್ವಾಮಿ ಪರ ಅವರ ಮಗ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಹಳ್ಳಿ ಹಳ್ಳಿಗಳಿಗೆ ತೆರಳಿ ನಿಖಿಲ್ ರೋಡ್ ಶೋ ನಡೆಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ನಿಖಿಲ್ ನನ್ನ ತಂದೆ ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರಚಾರ ಮಾಡಬೇಕಾಗಿದ್ದು, ನಾನು ಅವರ ಪರ ಪ್ರಚಾರ ಮಾಡುತ್ತಿದ್ದೇನೆ. ರಾಮನಗರ ಕ್ಷೇತ್ರ ನನ್ನ ತಂದೆಯವರಿಗೆ ತಾಯಿ ಮಗನ ಸಂಬಂಧ ಇದ್ದಂತೆ. ಅವರ ಪರವಾಗಿ ನಾನು ಪ್ರಚಾರ ಆರಂಭಿಸಿದ್ದೇನೆ. ಈಗಾಗಲೇ ಚಿತ್ರದುರ್ಗ ಸೇರಿದಂತೆ ಹಲವು ಕಡೆ ಪ್ರಚಾರದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆ ಇದೆ ಎಂದರು. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿನ ಸಾಧನೆಗಳ ಬಗ್ಗೆ ತಿಳಿಸುವ ಮೂಲಕ ನಿಖಿಲ್ ಪ್ರಚಾರ ಮಾಡುತ್ತಿದ್ದಾರೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳಿಂದ ಬೈಕ್ ರ‍್ಯಾಲಿ ನಡೆಸಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವಿದೆ. ಈ ಬಾರಿ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರ ಒತ್ತಡದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರದಿಂದ ತಂದೆ ಸ್ಪರ್ಧಿಸಿದ್ದಾರೆ. ತಂದೆಗೆ ಸಹಾಯ ಮಾಡಲು ನಾನು ಕೂಡ ಹಳೇಮೈಸೂರು ಪ್ರಾಂತ್ಯದ ಜಿಲ್ಲೆಯಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ನಿಖಿಲ್ ಹೇಳಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಗ್ರಾಮಗಳಲ್ಲಿ ರೋಡ್ ಶೋ ಮಾಡುತ್ತಿರುವ ನಿಖಿಲ್‌ಗೆ ಸ್ಥಳೀಯ ಜೆಡಿಎಸ್ ಮುಖಂಡರು ಸಾಥ್ ನೀಡಿದರು.
Comments