ಮದುರೆ ಹೋಬಳಿಯ ಹಿರಿಯ ಮುಖಂಡ ಸತ್ಯನಾರಾಯಣ ಗೌಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ





ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮದುರೆ ಹೋಬಳಿಯ ಕಾಂಗ್ರೆಸ್ ಪಕ್ಷದಲ್ಲಿದ್ದ ಹಿರಿಯ ಮುಖಂಡರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ.ಡಿ. ಸತ್ಯನಾರಾಯಣಗೌಡ ಇಂದು ಕಾಂಗ್ರೆಸ್ ತೊರೆದು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಯ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಹಾಗೂ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ ನವರ ನೇತೃತ್ವದಲ್ಲಿ. ಬಿಜೆಪಿಯ ಹಿರಿಯ ಮುತ್ಸದ್ದಿ ಕೇಂದ್ರ ಮಂತ್ರಿ ಶ್ರೀ ಅನಂತಕುಮಾರ್ ರವರ ಸಮ್ಮುಖದಲ್ಲಿ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಬಿಜೆಪಿಯ ತಾಲ್ಲೂಕಿನ ಎಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.
Comments